ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಸಂಕಷ್ಟ

Update: 2023-03-28 15:56 GMT

ಬೆಂಗಳೂರು, ಮಾ.28: ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. 

2015ರಲ್ಲಿ ಗುರುಪಾದಯ್ಯ ಮಠದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಸಂಪೂರ್ಣ ತನಿಖೆ ಮುಕ್ತಾಯಗೊಂಡ ಬಳಿಕ ಅಂತಿಮ ವರದಿ ಸಿದ್ಧವಾಗಿದೆ ಎಂದು ನ್ಯಾಯಪೀಠಕ್ಕೆ ಲೋಕಾಯುಕ್ತ ಪೊಲೀಸರು ತಿಳಿಸಿದ್ದರು. ಅಲ್ಲದೆ, ಸಕ್ಷಮ ಪ್ರಾಧಿಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ವಿವರಿಸಿದ್ದರು.

ಇದೀಗ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಪ್ರಕರಣ ರದ್ದು ಕೋರಿ ರೇಣುಕಾಚಾರ್ಯ ಸಲ್ಲಿಸಿ ವಜಾಗೊಳಿಸಿದ್ದು, ರೇಣುಕಾಚಾರ್ಯ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ.

ಇದನ್ನೂ ಓದಿ: ಎಪ್ರಿಲ್ 5ರಂದು ಕೋಲಾರಕ್ಕೆ ರಾಹುಲ್ ಗಾಂಧಿ: 'ಸತ್ಯಮೇವ ಜಯತೇ' ಸಮಾವೇಶದಲ್ಲಿ ಭಾಗಿ

Similar News