ತುಮಕೂರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಸಚಿವ ಸೋಮಣ್ಣ ಪುತ್ರ ಅರುಣ್ ಸೋಮಣ್ಣ ನೇಮಕ

Update: 2023-03-28 15:28 GMT

ಬೆಂಗಳೂರು, ಮಾ. 28: ಪ್ರಾತಿನಿಧ್ಯ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ವಸತಿ ಸಚಿವ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿರುವ ಡಾ.ಅರುಣ್ ಸೋಮಣ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸೂಚನೆ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್ ತಿಳಿಸಿದ್ದಾರೆ.

Similar News