ವಿಟ್ಲ: ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

Update: 2023-03-28 16:50 GMT

ವಿಟ್ಲ: ತೆಂಗಿನಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿರುವುದು ವರದಿಯಾಗಿದೆ.

ಪೆರ್ಲ ಎಣ್ಮಕಜೆ ಗ್ರಾಮ ನಲ್ಕ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ ಕೆ. (54) ಮೃತಪಟ್ಟವರು. 

ಮರಕ್ಕಿಣಿಯಲ್ಲಿ ವ್ಯಕ್ತಿಯೊಬ್ಬರ ಮನೆಯ ಪಕ್ಕದಲ್ಲಿರುವ ತೆಂಗಿನಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ನೆಲಕ್ಕೆ ಬಿದ್ದ ಇವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News