ಎಪ್ರಿಲ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ

Update: 2023-03-29 04:12 GMT

ಬೆಳಗಾವಿ, ಮಾ.29: ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಎಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 2-3 ದಿನಗಳಿಂದ ನಮ್ಮ ಪಕ್ಷದ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಆಮಿಷ ಒಡ್ಡುತ್ತಿದ್ದಾರೆ. ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೇ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದಿವಾಳಿಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿರುಗೇಟು ನೀಡಿದರು.

Similar News