ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 108 ಕ್ರಿಮಿನಲ್ ಪ್ರಕರಣಗಳ ಆರೋಪಿ ಸೆರೆ

Update: 2023-03-29 12:04 GMT

ಬೆಂಗಳೂರು, ಮಾ. 29: ಒಟ್ಟು 108 ಕ್ರಿಮಿನಲ್ ಪ್ರಕರಣಗಳ ಆರೋಪಿಯನ್ನು ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. 

ಅಶ್ವಾಕ್ ಅಹ್ಮದ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದ್ದು, ಈತ 2010ರಲ್ಲಿ ಗ್ರ್ಯಾನಿಟಿ ಪ್ರಾಪರ್ಟಿಸ್ ಹೆಸರಿನ ಸಂಸ್ಥೆ ತೆರೆದು ಹೊಸಕೋಟೆಬಳಿ ಕೃಷಿ ಜಮೀನುಗಳನ್ನು ಅಕ್ರಮವಾಗಿ ರೆವಿನ್ಯೂನಿವೇಶನಗಳು ಎಂದುಮೋಸದಿಂದ ಸಾರ್ವಜನಿಕರಿಗೆ ಮಾರಾಟ ಮಾಡಿದ್ದನು. ಆರೋಪಿಯ ವಿರುದ್ಧ ರಾಮಮೂರ್ತಿನಗರ, ಇಂದಿರಾನಗರ ಮತ್ತು ಆಶೋಕನಗರ ಪೊಲೀಸ್ ಠಾಣೆಗಳಲ್ಲಿ ಒಟ್ಟು 108 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.

ಬಳಿಕ ಪ್ರಕರಣದ ತನಿಖೆಯನ್ನು ಆರಂಭಿಸಿದ್ದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ ಲ್ಯಾಂಡ್ ರೆವಿನ್ಯೂ ಕಾಯ್ದೆ ಪ್ರಕಾರ ಆತನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್‍ಸಲ್ಲಿಸಿದ್ದರು. 2016 ರಿಂದ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ಆರೋಪಿನನ್ನು ಸಿಸಿಬಿಯ ವಿಶೇಷ ವಿಚಾರಣಾ ದಳ ಬಂಧಿಸುವಲ್ಲಿ ಯಶಸ್ವಿಯಾಗಿದೆ. 

Similar News