​ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 181 ವಿದ್ಯಾರ್ಥಿಗಳು ಗೈರು

Update: 2023-03-29 14:01 GMT

ಮಂಗಳೂರು, ಮಾ.29 ದ.ಕ.ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಬಧವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 181  ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಸಮಾಜಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 4,387 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 4,261 ವಿದ್ಯಾರ್ಥಿಗಳು ಹಾಜರಾಗಿದ್ದರೆ, 126 ಮಂದಿ ಗೈರಾಗಿದ್ದಾರೆ. ಇದೇ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 59 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 46 ಮಂದಿ  ಹಾಜರಾಗಿದ್ದರೆ, 13 ಮಂದಿ ಗೈರಾಗಿದ್ದಾರೆ.

ಗಣಕ ವಿಜ್ಞಾನ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 7,238 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 7,206 ವಿದ್ಯಾರ್ಥಿಗಳು ಹಾಜರಾಗಿದ್ದರೆ, 32 ಮಂದಿ ಗೈರಾಗಿದ್ದಾರೆ. ಇದೇ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 92 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 82 ಮಂದಿ  ಹಾಜರಾಗಿದ್ದರೆ, 10 ಮಂದಿ ಗೈರಾಗಿದ್ದಾರೆ.

ಇಲೆಕ್ಟ್ರಾನಿಕ್ಸ್ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 279 ರೆಗ್ಯುಲರ್ ಮತ್ತು 2 ಪುನರಾವರ್ತಿತ ವಿದ್ಯಾರ್ಥಿಗಳು ಹಾಜರಾಗಿದ್ದರೆ ಎಂದು ಡಿಡಿಪಿಯು ಪ್ರಕಟನೆ ತಿಳಿಸಿದೆ.

Similar News