7 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2023-03-29 16:07 GMT

ಬೆಂಗಳೂರು, ಮಾ.29: ರಾಜ್ಯ ಸರಕಾರವು 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ರಾಜ್ಯ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಶ್ರೀಕರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯಾಗಿ, ಆಯುಷ್ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಅವರನ್ನು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಶೇಖ್ ತನ್ವೀರ್ ಅವರನ್ನು ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಉನ್ನತ ಶಿಕ್ಷಣ ಇಲಾಕೆಯ ಉಪ ಕಾರ್ಯದರ್ಶಿ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎಸ್.ರಂಗಪ್ಪ ಅವರನ್ನು ರಾಜ್ಯ ಔಷಧ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಕಲಬುರಗಿಯ ಸಾರ್ವಜನಿಕ ಸೂಚನೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಗರಿಮಾ ಪನ್ವಾರ್ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಆಕೃತಿ ಬನ್ಸಾಲ್ ಅವರನ್ನು ಹೊಸದಿಲ್ಲಿಯ ಕರ್ನಾಟಕ ಭವನದ ಹೆಚ್ಚುವರಿ ಸ್ಥಾನಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

Similar News