ದಕ್ಷಿಣ ಒಳನಾಡು: ಮುಂದಿನ 4 ದಿನ ಮಳೆ ಸಾಧ್ಯತೆ
Update: 2023-03-29 23:32 IST
ಬೆಂಗಳೂರು, ಮಾ.29: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಾ.30ರಿಂದ ಎ.2ರವರೆಗೆ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಒಣಹವೆ ಮುಂದುವರಿಯಲಿದೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 35.05 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ 23.40 ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: ವರುಣಾದಲ್ಲಿ ನಾನು ಮತಯಾಚನೆಗೆ ಬರಲ್ಲ...: ಸಿದ್ದರಾಮಯ್ಯ