ಮಾಲೆಗಾಂವ್ ಸ್ಫೋಟ ಪ್ರಕರಣ: ಲೆ.ಕ. ಪುರೋಹಿತ್ ಮನವಿ ತಿರಸ್ಕರಿಸಿದ ಸುಪ್ರಿಂ

Update: 2023-03-29 18:08 GMT

ಹೊಸದಿಲ್ಲಿ, ಮಾ. 29: ಬಾಂಬೆ ಉಚ್ಚ ನ್ಯಾಯಾಲಯದ ಆದೇಶ ಪ್ರಶ್ನಿಸಿ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸಲ್ಲಿಸಿದ ಮನವಿಯನ್ನು ಅಂಗೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ತೀರ್ಪಿಲ್ಲಿ ಹಸ್ತಕ್ಷೇಪ ನಡೆಸಲು ಯಾವುದೇ ಕಾರಣ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಮನವಿಯನ್ನು ಸೋಮವಾರ ತಿರಸ್ಕರಿಸುವ ಮುನ್ನ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಹಾಗೂ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಕೆಲವು ನಿಮಿಷ ವಿಚಾರಣೆ ನಡೆಸಿತು.

ತೀರ್ಪನ್ನು ಟೀಕಿಸುವುದಕ್ಕೆ ಪರಿಗಣಿಸಲಾದ ಆಧಾರವನ್ನು ನಾವು ಗಮನಿಸಿದಾಗ, ಈ ತೀರ್ಪನಲ್ಲಿ ಮಧ್ಯ ಪ್ರವೇಶಿಸಲು ಯಾವುದೇ ಕಾರಣ ಕಂಡು ಬರುವುದಿಲ್ಲ. ಆದುದರಿಂದ ವಿಶೇಷ ರಜಾ ಕಾಲದ ಅರ್ಜಿಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಪೀಠ ಹೇಳಿತು.

Similar News