ಶಿಕ್ಷಕರ ವರ್ಗಾವಣೆಗೆ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ

Update: 2023-03-29 18:22 GMT

ಬೆಂಗಳೂರು, ಮಾ. 29: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದರೂ ಸರಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಡೆಸಲು ಅನುಮತಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಚುನಾವಣೆ ಆಯೋಗಕ್ಕೆ ಮನವಿ ಮಾಡಿದೆ. 

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಪತ್ರ ಬರೆದಿರುವ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಈಗಾಗಲೇ ವರ್ಗಾವಣೆ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದ್ದರೂ ತಾಂತ್ರಿಕ ಕಾರಣದಿಂದ ತಡೆ ನೀಡಲಾಗಿತು.

88,324 ಶಿಕ್ಷಕರು ವರ್ಗಾವಣೆಗೆ ಅರ್ಜಿ ಹಾಕಿದ್ದಾರೆ. ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ, ವರ್ಗಾವಣೆಗೊಂಡ ಸ್ಥಳಕ್ಕೆ ನೂತನ ಶೈಕ್ಷಣಿಕ ವರ್ಷ ಆರಂಭದಿಂದ ಅಂದರೆ 2023ರ ಜೂ.1ರ ನಂತರ ಕರ್ತವ್ಯಕ್ಕೆ ಹಾಜರಾಗುವ ಷರತ್ತಿಗೆ ಒಳಪಟ್ಟು ಮುಖ್ಯೊಪಾಧ್ಯಾಯರು ಒಳಗೊಂಡ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಅನುಮತಿ ಕೋರಲಾಗಿದೆ. 

Similar News