ಮೋದಿ ಉಪನಾಮ ಹೇಳಿಕೆ: ಸೂರತ್ ಬಳಿಕ ಪಾಟ್ನಾದ ನ್ಯಾಯಾಲಯದಿಂದ ರಾಹುಲ್ ಗಾಂಧಿಗೆ ಸಮನ್ಸ್‌

Update: 2023-03-30 14:42 GMT

 
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಎ.12 ರಂದು ಹಾಜರಾಗುವಂತೆ ಪಾಟ್ನಾ ಶಾಸಕ ನ್ಯಾಯಾಲಯವು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.

“ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮ ಏಕಿದೆ?” ಎಂದು ರಾಹುಲ್‌ ಗಾಂಧಿಯವರು ನೀಡಿದ ಹೇಳಿಕೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಿಸಲಾಗಿದೆ.  
 
ಮಾರ್ಚ್ 23 ರಂದು, ಇದೇ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ರಾಹುಲ್‌ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಬಿಜೆಪಿ ಶಾಸಕ ಹಾಗೂ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ಅನ್ವಯ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Similar News