ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ಸೂಚನೆ

Update: 2023-03-30 14:56 GMT

ಚಿಕ್ಕಮಗಳೂರು, ಮಾ.30: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ಅಲ್ಲದೇ ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಚಿಕ್ಕಮಗಳೂರು ಎಸ್‌ಪಿಗೆ ನೋಟಿಸ್ ನೀಡಿದೆ.

30 ದಿನದ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು, 1 ಕೋಟಿ 38 ಲಕ್ಷದ 65 ಸಾವಿರದ 8 ಚೆಕ್ ಬೌನ್ಸ್ ಕೇಸ್ ನಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನೀಡಿತ್ತು. 30 ದಿನದೊಳಗೆ ಹಣ ಮರುಪಾವತಿ ಮಾಡಬೇಕು. ಇಲ್ಲವೇ 4ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸುವಂತೆ ಇತ್ತೀಚೆಗೆ ತೀರ್ಪು ನೀಡಿತ್ತು.

ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಹೂವಪ್ಪಗೌಡ ಎಂಬುವವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. 

Similar News