ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳ ಬ್ಯಾನರ್, ಕಟೌಟ್ ತೆರವಿಗೆ ಉಡುಪಿ ಡಿಸಿ ಸೂಚನೆ

Update: 2023-03-30 15:10 GMT

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಘೋಷಣೆಯಾಗಿರುವ ಕಾರಣ ಭಾರತ ಚುನಾವಣಾ ಆಯೋಗದ ಸೂಚನೆ ಯಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸರಕಾರದ ವತಿಯಿಂದ ಜಿಲ್ಲೆಯಾದ್ಯಂತ ಹಾಕಲಾಗಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದೇ ರೀತಿ 48 ಗಂಟೆಗಳಲ್ಲಿ ಖಾಸಗಿಯಾಗಿ ಹಾಕಿರುವ ಬ್ಯಾನರ್ ಹಾಗೂ ಕಟೌಟ್‌ಗಳನ್ನು  ಸಹ ತೆರವುಗೊಳಿಸುವಂತೆ ತಿಳಿಸಿದ್ದಾರೆ.  

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಚಾರ, ಶುಭಕೋರುವ ಹಾಗೂ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್, ಕಟೌಟ್ ಅಳವಡಿಸಲು, ಭಿತ್ತಿ ಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು ಹಾಗೂ ಗೋಡೆ ಬರಹ ಬರೆಯಲು ಸ್ಥಳೀಯಾಡಳಿತದಿಂದ ಅನುಮತಿ ನೀಡದಿರಲು ಆದೇಶಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. 

Similar News