ದ್ವಿ.ಪಿಯುಸಿ ವಿದ್ಯಾರ್ಥಿಗಳಿಗೆ ಎ.3ರಿಂದ ಕ್ರ್ಯಾಶ್‌ಕೋರ್ಸ್ ತರಬೇತಿ

Update: 2023-03-30 15:14 GMT

ಉಡುಪಿ, ಮಾ.30: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಹಾಗೂ ಜೆಇಇ ಕ್ರ್ಯಾಶ್ ಕೋರ್ಸ್ ತರಬೇತಿ ಎ.3ರಿಂದ ಈ ಕೆಳಕಂಡ ಕಾಲೇಜುಗಳಲ್ಲಿ ನಡೆಯಲಿದೆ.

ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಕಾರ್ಯನಿರ್ವಹಿಸಲಿದ್ದಾರೆ.

ಬೈಂದೂರು, ನಾವುಂದ, ಉಪ್ಪುಂದ ಹಾಗೂ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಪಿ ನಾಯಕ್ ಕಾರ್ಯ ನಿರ್ವಹಿಸುವರು.

ಕೋಟೇಶ್ವರ ಹಾಗೂ ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಪ್ರಾಂಶುಪಾಲೆ ಸುಶೀಲಾ ಇರುತ್ತಾರೆ. ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್‌ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಇರುತ್ತಾರೆ.

ಹೆಬ್ರಿ, ಹಿರಿಯಡ್ಕ ಮತ್ತು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಗಳ ವಿದ್ಯಾರ್ಥಿಗಳಿಗೆ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್, ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಬೇಬಿ ಶೆಟ್ಟಿ ಕಾರ್ಯನಿರ್ವಹಿಸಲಿದ್ದಾರೆ.

ಬೆಳ್ಮಣ್ಣು ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಕಿಶೋರಿ ಬಿ., ಬಜಗೋಳಿ, ಸಾಣೂರು ಹಾಗೂ ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಅಖಿಲಾ ಜಿ ಹೆಬ್ಬಾರ್ ಇರುವರು.

ಹಾಲಾಡಿ ಹಾಗೂ ಬಿದ್ಕಲ್‌ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಿದ್ಕಲ್‌ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ವಿಘ್ನೇಶ್ವರ ಭಟ್, ಶಂಕರನಾರಾಯಣ ಹಾಗೂ ಹೊಸಂಗಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೊಸಂಗಡಿ ಸ.ಪ.ಪೂ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿ  ಕಾಲೇಜಿನ ಪ್ರಾಂಶುಪಾಲ ಗೋಪಾಲ ಭಟ್ ಕಾರ್ಯ ನಿರ್ವಹಿಸುವರು. 

ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಉಪಾಧ್ಯ ಅವರನ್ನು ನೋಡೆಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News