ಉದ್ದಿಮೆ ಪರವಾನಿಗೆ ನವೀಕರಣ: ಅರ್ಜಿ ಆಹ್ವಾನ

Update: 2023-03-30 16:17 GMT

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಉದ್ದಿಮೆದಾರರು 2023-24ನೇ ಸಾಲಿನಲ್ಲಿ ವ್ಯಾಪಾರ ಆನ್‌ಲೈನ್ ತಂತ್ರಾಂಶದ ಮೂಲಕ ಸೃಷ್ಟಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಬೇಕಾಗಿದ್ದು, ಪ್ರಸಕ್ತ ಸಾಲಿನಲ್ಲಿ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಲು ಬಾಕಿ ಇರುವವರು ಹಾಗೂ ನವೀಕರಿಸದೇ ಇರುವವರು ಕೂಡಲೇ ದಂಡ ಪಾವತಿಯೊಂದಿಗೆ ವೆಬ್‌ಸೈಟ್ - http://www.mrc.gov.in/TradeLicense/login- ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

2023ರ ಎ.1ರ ನಂತರ 2023-24 ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗುವುದು. ಉದ್ದಿಮೆ ಪರವಾನಿಗೆ ಪಡೆದು ಉದ್ದಿಮೆ ನಡೆಸದೇ ಇರುವವರು ನಗರಸಭೆ ಕಚೇರಿಗೆ ಲಿಖಿತ ಮಾಹಿತಿ ನೀಡಿ, ಉದ್ದಿಮೆ ಪರವಾನಿಗೆ ರದ್ದುಪಡಿಸಲು ಕ್ರಮ ವಹಿಸಬೇಕು.ತಪ್ಪಿದ್ದಲ್ಲಿ ಸದರಿ ಉದ್ದಿಮೆ ಶುಲ್ಕ ಹಾಗೂ ದಂಡ ವಿಧಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಗರಸಭೆ ಪೌರಾಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Similar News