ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ: 8.42 ಲಕ್ಷ ವಿದ್ಯಾರ್ಥಿಗಳು ನೋಂದಣಿ

3,305 ಒಟ್ಟು ಪರೀಕ್ಷಾ ಕೇಂದ್ರಗಳು

Update: 2023-03-31 03:33 GMT

ಬೆಂಗಳೂರು, ಮಾ.31: ಪ್ರಸಕ್ತ ವರ್ಷದ ಎಸೆಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ಎ.15ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ನಡೆಯಲಿದೆ. ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

5,833 ಸರಕಾರಿ ಶಾಲೆಗಳಿಂದ 3,60,862 ವಿದ್ಯಾರ್ಥಿಗಳು, 3,605 ಅನುದಾನಿತ ಶಾಲೆಗಳಿಂದ 2,20,831 ವಿದ್ಯಾರ್ಥಿಗಳು ಹಾಗೂ 6,060 ಖಾಸಗಿ ಶಾಲೆಗಳಿಂದ 2,61,118 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. 7,94,611 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆಯನ್ನು ತೆಗೆದುಕೊಂಡಿದ್ದು, 20,750 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.   

ಮಾ.31ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಎ.3ರಂದು ಗಣಿತ, 6ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, 8ರಂದು ಎಂಜಿನಿಯರಿಂಗ್, ಅರ್ಥಶಾಸ್ತ್ರ ಸೇರಿದಂತೆ ಇತರೆ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

Similar News