ಉಪ್ಪಿನಂಗಡಿ: WhatsApp ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

Update: 2023-03-31 16:25 GMT

ಉಪ್ಪಿನಂಗಡಿ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ WhatsApp ಸ್ಟೇಟಸ್ ಹಾಕಿ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.30ರ ಮಧ್ಯರಾತ್ರಿ ನೆಲ್ಯಾಡಿ ಸಮೀಪದ ಇಚಿಲಂಪಾಡಿ ಎಂಬಲ್ಲಿ ನಡೆದಿದೆ.

ಇಂಚಿಲಂಪಾಡಿಯ ರೆನೀಶ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಈತನ ತಂದೆ, ತಾಯಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದು, ಈತನ ತಮ್ಮ ಮೂರು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮನೆಯಲ್ಲಿ ಒಬ್ಬಂಟಿಯಾಗಿದ್ದ ರೆನೀಶ್ ವಿದ್ಯುತ್ ಲೈನ್‍ನ ಕೆಲಸಕ್ಕೆ ಹೋಗುತ್ತಿದ್ದ. ಮಾ.30ರಂದು ಕೆಲಸಕ್ಕೆ ಹೋಗಿ ಬಂದಿರುವ ಈತ ತನ್ನ  WhatsApp ಸ್ಟೇಟಸ್‍ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಈತ ಈ ಕೃತ್ಯ ನಡೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Similar News