ಶಾಸಕ ನೆಹರೂ ಓಲೆಕಾರ್‌ನ್ನೇಕೆ ಅನರ್ಹಗೊಳಿಸಿಲ್ಲ?: ಹೈಕೋರ್ಟ್

Update: 2023-04-01 09:01 GMT

ಬೆಂಗಳೂರು, ಮಾ.31: ಬೇರೆಯವರನ್ನಾದರೆ ತಕ್ಷಣವೇ ಅನರ್ಹಗೊಳಿಸಲಾಗುತ್ತದೆ, ಆದರೆ, ಈ ಜನಪ್ರತಿನಿಧಿಯನ್ನೇಕೆ ಅನರ್ಹಗೊಳಿಸಿ ಆದೇಶಿಸಿಲ್ಲ ಎಂದು ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್ ವಂಚನೆ ಪ್ರಕರಣದಲ್ಲಿ ದೋಷಿಯೆಂದು ಪರಿಗಣಿಸಲ್ಪಟ್ಟಿರುವ ಹಾವೇರಿಯ ಬಿಜೆಪಿ ಶಾಸಕ ಓಲೆಕಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಪ್ರಶ್ನಿಸಿದ ಘಟನೆ ಶುಕ್ರವಾರ ನಡೆಯಿತು.

ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ವಿಚಾರಣೆ ವೇಳೆ ಹೈಕೋರ್ಟ್ ಪ್ರಶ್ನಿಸಿದ ರಾಜ್ಯ ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ತೀರ್ಮಾನಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿಜೆಪಿ ಶಾಸಕ ನೆಹರೂ ಓಲೆಕಾರ್ ಸಲ್ಲಿಸಿದ್ದ ಅರ್ಜಿ ಕುರಿತ ವಿಚಾರಣೆಯ ಹೈಕೋರ್ಟ್‌ನಲ್ಲಿ ನಡೆಯಿತು. 

ಶಾಸಕ ನೆಹರೂ ಓಲೆಕಾ‌ ಸಲ್ಲಿಸಿದ ಮಧ್ಯಂತರ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತು. 

Similar News