×
Ad

ಚಿಕ್ಕಮಗಳೂರು ಕಾಂಗ್ರೆಸ್ ಸಭೆಯಲ್ಲಿ ಮಾರಾಮಾರಿ, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಾರ್ಯಕರ್ತರು

Update: 2023-04-01 16:04 IST

ಚಿಕ್ಕಮಗಳೂರು: ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಎಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ ನ ಕೆಲವು ಮುಖಂಡರು ಪಟ್ಟು ಹಿಡಿದಿದ್ದು, ಶನಿವಾರ ಸಭೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. 

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಕಾರ್ಯಕರ್ತರ ನಡುವೆ ಮಾರಾ ಮಾರಿ ನಡೆದು ಕೈ ಕೈ ಮಿಲಾಯಿಸಿದ ಹಂತಕ್ಕೆ ತಲುಪಿತ್ತು. ಇದರಿಂದ ಸಭೆಯಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. 

ಶಾಸಕ ಸಿ.ಟಿ. ರವಿ ಆಪ್ತರಾಗಿದ್ದ ತಮ್ಮಯ್ಯ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.  ಈ ಬಾರಿ ಚಿಕ್ಕಮಗಳೂರು ಕ್ಷೇತ್ರಕ್ಕೆ ತಮ್ಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಐದರಿಂದ ಹತ್ತು ವರ್ಷ ಪಕ್ಷದಲ್ಲಿ ದುಡಿಯಲಿ, ಆಮೇಲೆ ಅವರಿಗೆ ಟಿಕೆಟ್ ಕೊಡಲಿ. ಅರ್ಜಿ ಹಾಕಿಲ್ಲ, ಬಂದ ಕೂಡಲೇ ಟಿಕೆಟ್ ಅಂದರೆ ಹತ್ತಿಪ್ಪತ್ತು ವರ್ಷದಿಂದ ಪಕ್ಷ‌ ಸಂಘಟನೆ ಮಾಡಿದವರು ಏನು ಮಾಡಬೇಕು ಎಂದು ಕಿಡಿ ಕಾರಿದರು.

Similar News