ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಅರ್ಜಿ ಆಹ್ವಾನ

Update: 2023-04-01 14:20 GMT

ಉಡುಪಿ, ಎ.1: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ದಿಮೆ ದಾರರಿಗೆ 2023-24ನೇ ಸಾಲಿನಲ್ಲಿ ವ್ಯಾಪಾರ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗು ತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಲು ಬಾಕಿ ಹಾಗೂ ನವೀಕರಿಸದೇ ಇರುವವರು ಈ ಕೂಡಲೇ ದಂಡ ಪಾವತಿಯೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಎ.1ರ ನಂತರ 2023-24ನೆ ಸಾಲಿನ ಪರವಾನಿಗೆ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗುವುದು. ಪರವಾನಿಗೆ ಪಡೆದು ಉದ್ದಿಮೆ ನಡೆಸದೆ ಇರುವವರು ಲಿಖಿತ ಮಾಹಿತಿ ನೀಡಿ, ಉದ್ದಿಮೆ ಪರವಾನಿಗೆ ರದ್ದುಪಡಿಸದಿದ್ದಲ್ಲಿ ಉದ್ದಿಮೆ ಶುಲ್ಕ ಹಾಗೂ ದಂಡ ವಿಧಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯತ್ ಕಚೇರಿಯ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.  

Similar News

ನಾಪತ್ತೆ