ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ

Update: 2023-04-01 15:27 GMT

ಬೆಂಗಳೂರು, ಎ.1: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಐದು ದಿನಗಳ ಕಾಲ ವಿಸ್ತರಣೆ ಮಾಡಿದೆ.

ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ,ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ಎ.6ರವರೆಗೂ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿದೆ. 

2020ರಲ್ಲಿ ಸಿಬಿಐ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು.

Similar News