ಉಡುಪಿ: ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ

Update: 2023-04-02 12:44 GMT

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವು ರವಿವಾರ ಉಡುಪಿ ಪೊಲೀಸ್ ಕವಾಯತು ಚಂದು ಮೈದಾನದಲ್ಲಿ ನಡೆಯಿತು.

ನಿವೃತ್ತ ಪೊಲೀಸ್ ನಿರೀಕ್ಷಕ ಜಯಂತ್ ಎಂ. ಗೌರವ ವಂದನೆ ಸ್ವೀಕರಿಸಿ, ಪೊಲೀಸ್ ಧ್ವಜವನ್ನು ಅನಾವರಣ ಗೊಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಕಲ್ಯಾಣ ನಿಧಿ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಕರಾವಳಿ ಕಾವಲು ಪೊಲೀಸ್ ಎಸ್ಪಿ ಅಬ್ದುಲ್ ಅಹದ್ ಮಾತನಾಡಿದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ.ಹಾಕೇ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ವಂದಿಸಿದರು. ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ಎಚ್.ಎಸ್. ಹಾಗೂ ಮಲ್ಪೆ ಸಿಎಸ್‌ಪಿ ಕಂಟ್ರೋಲ್ ರೂಮ್ ಎಸ್ಸೈ ಬಿ.ಮನನೋಹನ ರಾವ್ ಕಾರ್ಯಕ್ರಮ ನಿರೂಪಿಸಿದರು.    

Similar News