ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸಾಧ್ಯತೆ
Update: 2023-04-02 20:16 IST
ಬೆಂಗಳೂರು, ಎ.2: ರಾಜ್ಯದಲ್ಲಿ ಮುಂದಿನ 3 ದಿನ ಮಳೆ (RAIN) ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಎ.3ರಿಂದ ಎ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸರಾಸರಿ 2 ಡಿಗ್ರಿ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಬೆಳಗಾವಿ: ಶಾಸಕನ ಪುತ್ರನ ಕಾರನ್ನು ತಪಾಸಣೆ ಮಾಡದ ಅಧಿಕಾರಿಗೆ ತಹಶೀಲ್ದಾರ್ ತರಾಟೆ