×
Ad

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಇಂದು ರಾಹುಲ್ ಗಾಂಧಿ ಸೂರತ್ ಗೆ

Update: 2023-04-03 12:54 IST

ಹೊಸದಿಲ್ಲಿ: ಮೋದಿ ಉಪನಾಮದ ಬಗ್ಗೆ ನೀಡಿರುವ ಹೇಳಿಕೆಗೆ   2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷಗಳ ಶಿಕ್ಷೆ ವಿಧಿಸಿರುವ  ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)  ಸೋಮವಾರ  ಗುಜರಾತ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ರಾಹುಲ್ ಗಾಂಧಿ ಅವರು ಮಧ್ಯಾಹ್ನ 2 ಗಂಟೆಗೆ ಸೂರತ್‌ಗೆ ಬಂದಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ

ಸೆಷನ್ಸ್ ನ್ಯಾಯಾಲಯದಲ್ಲಿ  ತನ್ನ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ರಾಹುಲ್ ಗಾಂಧಿ ಕೋರಲಿದ್ದಾರೆ ಎಂದು ಅವರ ವಕೀಲರು ಪಿಟಿಐಗೆ ತಿಳಿಸಿದ್ದಾರೆ. ಈ ಪ್ರಕರಣವನ್ನು ಸೆಷನ್ ಕೋರ್ಟ್‌ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ದೋಷಾರೋಪಣೆಯ ವಿರುದ್ಧ ರಾಹುಲ್ ಗಾಂಧಿಯ ಮೇಲ್ಮನವಿಗೂ ಮುನ್ನ ಕಾಂಗ್ರೆಸ್ ಸಂಸದರು ಸೋಮವಾರ ಸಭೆ ನಡೆಸಿ ತಮ್ಮ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಎಎನ್ ವರದಿ ಮಾಡಿದೆ.

ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ

ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಆಡಳಿತವಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷದ ನಾಯಕರು ರಾಹುಲ್ ಅವರೊಂದಿಗೆ ನ್ಯಾಯಾಲಯಕ್ಕೆ ಬರುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಮತ್ತು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆ. ಸಿ. ವೇಣುಗೋಪಾಲ್ ಕೂಡ ಸೂರತ್‌ನಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸೇರುವ ಸಾಧ್ಯತೆಯಿದೆ.

ರಾಹುಲ್ ಗಾಂಧಿ ನಗರಕ್ಕೆ ಭೇಟಿ ನೀಡುವ ಮುನ್ನ ರಾಗಾ, ಪ್ರಿಯಾಂಕಾ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪೋಸ್ಟರ್‌ಗಳು ಹಾಗೂ  ಹೋರ್ಡಿಂಗ್‌ಗಳು ಪಕ್ಷದ ಧ್ವಜಗಳೊಂದಿಗೆ ರಸ್ತೆಯ ಇಕ್ಕೆಲಗಳಲ್ಲಿ   ಕಂಡುಬಂದವು.

Similar News