×
Ad

ಬಿಜೆಪಿ ತೊರೆದಿದ್ದ ಮಾಜಿ ಶಾಸಕ ಎನ್​.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ

Update: 2023-04-03 13:54 IST

ಬೆಂಗಳೂರು: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ವೈ.ಗೋಪಾಲಕೃಷ್ಣ ಸೋಮವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪಕ್ಷ ಸೇರಿದರು. 

ಇತ್ತೀಚೆಗೆ ಶಿರಸಿಯಲ್ಲಿ ಸ್ವೀಕರ್ ವಿಶ್ವೇಶ್ವರ್‌ ಹೆಗಡೆ ಕಾಗೇರಿ ನಿವಾಸಕ್ಕೆ ತೆರಳಿ ಕೂಡ್ಲಿಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸದ್ದ ಎನ್​.ವೈ.ಗೋಪಾಲಕೃಷ್ಣ, ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಹಾಕಿದರೆ ಶಿಸ್ತು ಕ್ರಮ: ಕಾರ್ಯಕರ್ತರಿಗೆ ಕೆಪಿಸಿಸಿ ಎಚ್ಚರಿಕೆ

Similar News