ಎ.8 ಅಥವಾ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2023-04-03 13:07 GMT

ಬೆಳಗಾವಿ: 'ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಎ.8 ಅಥವಾ 9ರಂದು ಬಿಡುಗಡೆಯಾಗಲಿದೆ' ಎಂದು ಕೇಂದ್ರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಜಿಲ್ಲಾ ಕೋರ್​ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಲು ಚಿಂತನೆ ನಡೆಸಿದ್ದೇವೆ. ಜಿಲ್ಲೆಯ ಪ್ರತಿಯೊಬ್ಬರ ನಾಯಕರ ಜತೆ ಪ್ರತ್ಯೇಕವಾಗಿ ಚರ್ಚಿಸಿದ್ದೇನೆ'' ಎಂದು ತಿಳಿಸಿದರು. 

ಜಾರಕಿಹೊಳಿ ಸಹೋದರರ ಕ್ಷೇತ್ರ ಬದಲಾವಣೆ ಮಾಡಬೇಕೆನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ''ಅದು  ಪಕ್ಷದ ಆಂತರಿಕ ವಿಚಾರ ಅದನ್ನು ಪಾರ್ಟಿಯಲ್ಲಿ ಚರ್ಚೆ ಮಾಡುತ್ತೇವೆ. ನಾವು ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ'' ಎಂದರು.

Similar News