ಬೈಕ್‍ಗೆ ಕಾರು ಢಿಕ್ಕಿ: ತಂದೆ-ಮಗಳು ಮೃತ್ಯು
Update: 2023-04-03 20:43 IST
ಬೆಂಗಳೂರು, ಎ. 3: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜಮಾಲ್ ಪಾಳ್ಯದಲ್ಲಿರುವ ವೆಂಕಟ್ ಶಾಲೆ ಮುಂಭಾಗ ಬೆಳಗ್ಗೆ ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿರುಬ ಘಟನೆ ವರದಿಯಾಗಿದೆ.
ಮೃತರನ್ನು ಕಲ್ಯಾ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಯೋಗೇಶ್ (45) ಹಾಗೂ ಅವರ ಪುತ್ರಿ ಹೇಮಶ್ರೀ (14) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ 9ಗಂಟೆಯ ಸುಮಾರಿಗೆ ಯೋಗೇಶ್ ತನ್ನ ಮಗಳನ್ನು ಶಾಲೆಗೆ ಬಿಡಲು ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ಶರವೇಗದಲ್ಲಿ ಬಂದ ಕಾರು ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್‍ನಲ್ಲಿ ತಂದೆ-ಮಗಳು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.