ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ FIR
Update: 2023-04-03 20:59 IST
ಮಂಡ್ಯ, ಎ.3: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ 500 ರೂ. ಮುಖಬೆಲೆಯ ನೋಟು ಎಸೆದಿದ್ದಾರೆಂಬ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾ.28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದ ಡಿ.ಕೆ.ಶಿವಕುಮಾರ್ ಅವರು, ಬೇವಿನಹಳ್ಳಿಯಲ್ಲಿ ರೋಡ್‍ಶೋ ವೇಳೆ ಕಲಾವಿದರಿಗೆ 500 ರೂ.ಗಳ ನೋಟುಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಸೆಕ್ಟರ್ ಅಧಿಕಾರಿ ಅಶೋಕ್ ಪಿ. ಅವರು ನೀಡಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಪ್ರಥಮ ಮಾಹಿತಿ ವರದಿ ಸಲ್ಲಿಸಿದ್ದಾರೆ.