ಉಡುಪಿ: ಅಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳ ತೆರವಿಗೆ ಸೂಚನೆ
Update: 2023-04-03 21:03 IST
ಉಡುಪಿ: ರಾಜ್ಯದ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ತೆರವು ಗೊಳಿಸುವಂತೆ ಹಾಗೂ ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ಅಳವಡಿಸದಂತೆ ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು.
ತಪ್ಪಿದ್ದಲ್ಲಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಿ, ಎಫ್‌ಐಆರ್ ದಾಖಲಿಸಲು ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.