SSLC Exam: ಗಣಿತ ಪರೀಕ್ಷೆಯಲ್ಲಿ 13 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು, ಓರ್ವ ವಿದ್ಯಾರ್ಥಿ ಡಿಬಾರ್
Update: 2023-04-03 23:07 IST
ಬೆಂಗಳೂರು, ಎ.3: ಪ್ರಸಕ್ತ ವರ್ಷದ ಎಸೆಸೆಲ್ಸಿ ಪರೀಕ್ಷೆಯು ನಡೆಯುತ್ತಿದ್ದು, (ಎ.3)ಸೋಮವಾರದಂದು ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ 13 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಗಣಿತ ವಿಷಯದಲ್ಲಿ 8,28,273 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 8,14,508 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 13,765 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಕಲಬುರಗಿ ಜಿಲ್ಲೆಯಲ್ಲಿ ಪರೀಕ್ಷಾ ಸಂದರ್ಭದಲ್ಲಿ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿಯನ್ನು ಡಿಬ್ಬಾರ್ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಅಂಕಿ-ಅಂಶಗಳನ್ನು ಪ್ರಕಟಿಸಿದೆ.