×
Ad

ರೌಡಿ ಶೀಟರ್ ಅಶೋಕ್ ಪೈ ಗಡಿಪಾರು: ಮಂಡ್ಯ ಡಿಸಿ ಆದೇಶಕ್ಕೆ ಹೈಕೋರ್ಟ್ ತಡೆ

Update: 2023-04-05 23:01 IST

ಬೆಂಗಳೂರು, ಎ.5: ಅಪರಾಧ ಚಟುವಟಿಕೆಯಲ್ಲಿ ನಿರತವಾಗಿರುವ ಆರೋಪದ ಮೇಲೆ ರೌಡಿಶೀಟರ್ ಅಶೋಕ್ ಪೈರನ್ನು  ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದೀಗ ಈ ಆದೇಶಕ್ಕೆ ಹೈಕೋರ್ಟ್ ಮಂಧ್ಯಂತರ ತಡೆಯಾಜ್ಞೆ ನೀಡಿದೆ. 

ಗಡಿಪಾರು ಆದೇಶ ರದ್ದುಪಡಿಸುವಂತೆ ಕೋರಿ ಅಶೋಕ ಪೈ(50) ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ನ್ಯಾಯಪೀಠ, ಈ ಆದೇಶ ನೀಡಿದೆ. 

ಅರ್ಜಿಯಲ್ಲಿ ಪ್ರತಿವಾದಿಗಳಾದ ಮಂಡ್ಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?: ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಅಶೋಕ್ ಪೈ ಅವರನ್ನು 2023ರ ಮಾ.15ರಿಂದ ಜು.15ರವರೆಗೆ ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದು ಕಾನೂನು ಬಾಹಿರ ಕ್ರಮವಾಗಿದ್ದು, ಗಡಿಪಾರು ಆದೇಶ ರದ್ದುಪಡಿಸಬೇಕು ಎಂದು ಅಶೋಕ್ ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಗಡಿಪಾರು ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.

Similar News