ಮಡಿಕೇರಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
Update: 2023-04-05 23:16 IST
ಮಡಿಕೇರಿ, ಎ.5: ಗುಂಡು ಹೊಡೆದುಕೊಂಡು ವ್ಯಕ್ತಿ ಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿ ಕೇರಿ ಸಮೀಪದ ಕಾಟಕೇರಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಕಾಟಕೇರಿ ನಿವಾಸಿ ಕೆ.ಎ.ಉತ್ತಪ್ಪ(72) ಎಂಬವರೆ ಸಾವನ್ನಪ್ಪಿರುವ ವ್ಯಕ್ತಿ ಎಂದು ತಿಳಿದು ಬಂದಿದೆ.
ಬುಧವಾರ ಬೆಳಗ್ಗಿನ ಜಾವ ಉತ್ತಪ್ಪ ಅವರು ಕಾಫಿ ತೋಟದಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.