ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆ್ಯಂಟನಿ ಅವರ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆ
Update: 2023-04-06 15:39 IST
ಹೊಸದಿಲ್ಲಿ: ಕಾಂಗ್ರೆಸ್ ನ ಹಿರಿಯ ನಾಯಕ ಎ.ಕೆ. ಆ್ಯಂಟನಿ ಅವರ ಪುತ್ರ ಅನಿಲ್ ಆ್ಯಂಟನಿ (Anil Antony) ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ವಿ. ಮುರಳೀಧರನ್ ಅವರ ಸಮ್ಮುಖದಲ್ಲಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಡಿಜಿಟಲ್ ಮಾಧ್ಯಮ ಸಂಚಾಲಕ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ರಾಷ್ಟ್ರೀಯ ಸಂಯೋಜಕ ಸ್ಥಾನವನ್ನು ಹೊಂದಿದ್ದ ಅನಿಲ್ ಆ್ಯಂಟನಿ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ ನಂತರ ಕಾಂಗ್ರೆಸ್ ಪಾರ್ಟಿಯನ್ನು ತೊರೆದಿದ್ದರು.