ಉಡುಪಿ: ಜನನ-ಮರಣ ಪ್ರಮಾಣ ಪತ್ರ ಅರ್ಜಿದಾರರ ಮನೆ ಬಾಗಿಲಿಗೆ
Update: 2023-04-06 21:21 IST
ಉಡುಪಿ, ಎ.6: ಉಡುಪಿ ನಗರಸಭೆಯಲ್ಲಿ ಜನನ ಮರಣ ಪ್ರಮಾಣ ಪತ್ರ ಪಡೆಯಲು ಸೂಕ್ತ ವಿಳಾಸ ನಮೂದಿಸಿ, ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ್ದಲ್ಲಿ, ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ಮನೆ ಬಾಗಿಲಿಗೆ ರವಾನಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.