×
Ad

ಉಡುಪಿಯಲ್ಲಿ ವಿಶ್ವ ಆರೋಗ್ಯ ದಿನಾಚರಣೆ

Update: 2023-04-06 21:25 IST

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಸ್ಪತ್ರೆ ಎನ್.ಸಿ.ಡಿ ವಿಭಾಗ, ಜಿಲ್ಲಾ ಸರ್ವೇಕ್ಷಣಾ ವಿಭಾಗ ಎನ್.ಸಿ.ಡಿ ಘಟಕ, ಸಮುದಾಯ ವೈದ್ಯಕೀಯ ವಿಭಾಗ, ದಂತಚಿಕಿತ್ಸಾ ವಿಭಾಗ ಕೆ.ಎಂ.ಸಿ ಮಣಿಪಾಲ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಮೆಸ್ಕಾಂ ಉಡುಪಿ ಇವರ ಸಹಯೋಗದಲ್ಲಿ ಎಲ್ಲರಿಗೂ ಆರೋಗ್ಯ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಸ್ಕಾಂ ಪವರ್‌ಮ್ಯಾನ್ ನೌಕರರು ಹಾಗೂ ಕಚೇರಿ ಸಿಬ್ಬಂದಿಗಳಿಗೆ ಆರೋಗ್ಯ ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ಇಂದು ಉಡುಪಿಯ ಮೆಸ್ಕಾಂ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಘೋಷಣಾ ಫಲಕ ಬಿಡುಗಡೆ ಮಾಡಿ, ವಿಶ್ವ ಆರೋಗ್ಯ ದಿನಾಚರಣೆ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯೆ ಡಾ.ಆರ್ಕಷಿತ, ಸಮುದಾಯ ವೈದ್ಯಕೀಯ ವಿಭಾಗದ ಡಾ.ಜಗ್ನೇಶಿನಿ ಮೈಥಿ, ಸಮುದಾಯ ದಂತ ಚಿಕಿತ್ಸಾ ವಿಭಾಗದ ಹೆಚ್‌ಓಡಿ ಡಾ.ರಾಮಚಂದ್ರ ಪ್ರಸಾದ್, ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ದಿನೇಶ್‌ಉಪಾಧ್ಯಾಯ, ಉಪ ನಿಯಂತ್ರಣಾಧಿಕಾರಿ ರಮೇಶ್, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡಿಪುಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ಕಾರ್ಯಕ್ರಮ ನಿರೂಪಿಸಿದರು. ಎನ್‌ಸಿಡಿ ಕೌನ್ಸಿಲರ್ ಮನು ವಂದಿಸಿದರು.

Similar News