×
Ad

ಯಾದಗಿರಿ | ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ‌ಮಾರಾಮಾರಿ, ಕಲ್ಲು ತೂರಾಟ: 10ಕ್ಕೂ ಹೆಚ್ಚು ಕಾರುಗಳು ಜಖಂ

Update: 2023-04-06 22:50 IST

ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಮೆರೆವಣಿಗೆಯ ವೇಳೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮೆರೆವಣಿಗೆಗ ಆಕ್ಷೇಪ ವ್ಯಕ್ತಪಡಿಸಿದ್ದಾರೆನ್ನಲಾಗಿದ್ದು, ಈ ವೇಳೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ.  

ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಮುಖಂಡರ 10ಕ್ಕೂ ಹೆಚ್ಚು ಕಾರುಗಳು ಜಖಂಗೊಂಡಿವೆ. ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 

ಇದನ್ನೂ ಓದಿ: ಕಾಂಗ್ರೆಸ್ ನ ಒಟ್ಟು 166 ಅಭ್ಯರ್ಥಿಗಳ ಪಟ್ಟಿಯಲ್ಲಿ ಮಹಿಳೆಯರಿಗೆಷ್ಟು ಸ್ಥಾನ?| ಅಚ್ಚರಿ ಮೂಡಿಸಿದ 2ನೇ ಪಟ್ಟಿ!

Similar News