×
Ad

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧ

Update: 2023-04-07 00:25 IST

ಚಾಮರಾಜನಗರ: 50ನೇ ವರ್ಷದ ಹುಲಿಯೋಜನೆ ಸುವರ್ಣ ಮಹೋತ್ಸವದ ಆಚರಣೆ ಪ್ರಯುಕ್ತ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ 181 & 766 ರಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. 

ಈ ಸಂಬಂಧ ಗುರುವಾರ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, 'ಶುಕ್ರವಾರ (ಎ.7) ಸಂಜೆ 4ರಿಂದ 9ರ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಸರಕಾರಿ ಬಸ್‌ ಮತ್ತು ವಾಹನಗಳನ್ನು ಬಿಟ್ಟು ಉಳಿದೆಲ್ಲ ವಾಹನಗಳ ಸಂಚಾರವನ್ನು ಶನಿವಾರ (ಎ.8) ಸಂಜೆ 4ರಿಂದ 9ರ ಮಧ್ಯಾಹ್ನ 12ರವರೆಗೆ ನಿರ್ಬಂಧಿಸಲಾಗಿದೆ' ಎಂದು ಆದೇಶದಲ್ಲಿ ತಿಳಿಸಿದ್ದಾರೆ. 

ಭದ್ರತೆ, ರಸ್ತೆ ನಿರ್ವಹಣೆ ಹಾಗೂ ಇತರ ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು  ಅವರು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Similar News