×
Ad

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ

Update: 2023-04-07 12:33 IST

ಹೊಸದಿಲ್ಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ (Kiran Kumar Reddy )ಶುಕ್ರವಾರ  ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹೊಸದಿಲ್ಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ನಾಯಕರಾದ ಅರುಣ್ ಸಿಂಗ್, ಸಚಿವ ಪ್ರಹ್ಲಾದ್ ಜೋಶಿ ಅವರು   ರೆಡ್ಡಿ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.

 2014 ರಲ್ಲಿ ತೆಲಂಗಾಣ ರಾಜ್ಯ ರಚನೆಯಾಗುವ ಮೊದಲು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದ ರೆಡ್ಡಿ, ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯದಿಂದ ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.

ಮುಂದಿನ ವರ್ಷ ಆಂಧ್ರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರಲು ರೆಡ್ಡಿ ನಿರ್ಧಾರ ಕೈಗೊಂಡಿದ್ದು, ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಹಾಗೂ  ಪ್ರಮುಖ ಪ್ರತಿಪಕ್ಷ ತೆಲುಗು ದೇಶಂ ಪಕ್ಷ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

62ರ ಹರೆಯದ ರೆಡ್ಡಿ  ಅವರು 2014ರಲ್ಲಿಯೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ 'ಜೈ ಸಮೈಕ್ಯಂಧ್ರ' ಎಂಬ ತಮ್ಮದೇ ಪಕ್ಷವನ್ನು ಸ್ಥಾಪಿಸಿದ್ದರು.  ಆದರೆ 2014ರ ಚುನಾವಣೆಯಲ್ಲಿ ಯಾವುದೇ ಚುನಾವಣಾ ಪ್ರಭಾವ ಬೀರಲು ವಿಫಲರಾಗಿದ್ದರು. ನಂತರ ಅವರು 2018 ರಲ್ಲಿ ಮತ್ತೆ ಕಾಂಗ್ರೆಸ್‌ಗೆ ಸೇರಿದ್ದರು.  ಆದರೆ ದೀರ್ಘಕಾಲ ರಾಜಕೀಯದಲ್ಲಿ ನಿಷ್ಕ್ರಿಯರಾಗಿದ್ದರು.

Similar News