ಧ್ರುವನಾರಾಯಣ ಪುತ್ರ ದರ್ಶನ್ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮನಸ್ಸು ಒಪ್ಪುತ್ತಿಲ್ಲ: JDS ಶಾಸಕ ಜಿ.ಟಿ.ದೇವೇಗೌಡ
Update: 2023-04-07 18:29 IST
ಮೈಸೂರು: 'ತಂದೆ–ತಾಯಿ ಇಬ್ಬರನ್ನೂ ಕಳೆದುಕೊಂಡಿರುವ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿವಂಗತ ಧ್ರುವನಾರಾಯಣ ಪುತ್ರ ದರ್ಶನ್ ವಿರುದ್ಧ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮನಸ್ಸು ಒಪ್ಪುತ್ತಿಲ್ಲ’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ದಿವಂಗತ ಆರ್.ಧ್ರುವನಾರಾಯಣ ಮಕ್ಕಳು ಅನಾಥರಾಗಿದ್ದಾರೆ. ತಂದೆ ಕಳೆದುಕೊಂಡ ನೋವು ಇರುವಾಗಲೇ ತಾಯಿ ಕಳೆದುಕೊಂಡಿದ್ದಾರೆ. ಇಂತಹ ದುಃಖದಲ್ಲಿರುವವರ ಎದುರು ಸ್ಪರ್ಧಿಸಲು ನಮಗೆ ಮನಸ್ಸು ಒಪ್ಪುತ್ತಿಲ್ಲ' ಎಂದು ತಿಳಿಸಿದರು.
ಶಾಸಕ ಸಾ.ರಾ.ಮಹೇಶ್ ಮಾತನಾಡಿ, ''ದರ್ಶನ್ ಗೆ ಬೆಂಬಲ ನೀಡುವ ಬಗ್ಗೆ ಮೈಸೂರು ಭಾಗದ ಶಾಸಕರು ಮುಖಂಡರ ಜೊತೆ ಹೆಚ್ ಡಿ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ. ಹೀಗಾಗಿ ಸ್ಪರ್ಧೆ ಮಾಡಬೇಕಾ ಬೇಡ್ವಾ ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ'' ಎಂದು ತಿಳಿಸಿದರು.