ಪ್ರಸಾದ್‌ರಾಜ್ ಕಾಂಚನ್‌ಗೆ ಶುಭ ಹಾರೈಕೆ
Update: 2023-04-07 19:08 IST
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಆಯ್ಕೆಯಾದ ಪ್ರಸಾದ್‌ರಾಜ್ ಕಾಂಚನ್ ಅವರು ಈ ಬಾರಿಯ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಬರುವಂತೆ ಹಾರೈಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಅಜಿತ್‌ಕುಮಾರ್ ಶೆಟ್ಟಿ ವಡ್ಡರ್ಸೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಬ್ರಹ್ಮಾವರ ತಾಲೂಕು ಸಂಚಾಲಕ ಶ್ರೀನಿವಾಸ ವಡ್ಡರ್ಸೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ವಿಶ್ವಾಸ್ ಅಮೀನ್, ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ರೋಷನ್ ಶೆಟ್ಟಿ ಉಪಸ್ಥಿತರಿದ್ದರು.