×
Ad

TIME100: ವಿಶ್ವದ ಪ್ರಭಾವಿಗಳ ಪಟ್ಟಿಯಲ್ಲಿ ಶಾರುಖ್‌ ಖಾನ್‌ ಗೆ ನಂ. 1 ಪಟ್ಟ

Update: 2023-04-07 19:15 IST

ಮುಂಬೈ: ಬಾಲಿವುಡ್‌ ಬಾದ್‌ ಷಾ ಶಾರುಖ್ ಖಾನ್ ಅವರು ಟೈಮ್ ಮ್ಯಾಗಝಿನ್‌ನ 2023ರ  TIME100 ಓದುಗರ ಸಮೀಕ್ಷೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಲಿಯೊನೆಲ್ ಮೆಸ್ಸಿ ಐದನೇ ಸ್ಥಾನದಲ್ಲಿದ್ದಾರೆ. 

ಜಗತ್ತಿನ 100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಶಾರುಖ್‌ ಖಾನ್‌ ಮೊದಲ ಸ್ಥಾನ ಪಡೆದಿರುವುದು ಅವರ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಟೈಮ್ಸ್‌ನ ವರದಿಯ ಪ್ರಕಾರ, ಈ ಸಮೀಕ್ಷೆಯಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಮತ ಚಲಾಯಿಸಿದ್ದು, ಶಾರುಖ್ ಖಾನ್ ಒಟ್ಟು ಮತಗಳಲ್ಲಿ ಶೇಕಡಾ 4 ರಷ್ಟು ಪಡೆದಿದ್ದಾರೆ.  

ಎರಡನೇ ಸ್ಥಾನದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟ ಇರಾನ್ ನ ಮಹ್ಸಾ ಅಮಿನಿ ಇದ್ದಾರೆ. ಆರೋಗ್ಯ ಕಾರ್ಯಕರ್ತರು ಶೇ.2ರಷ್ಟು ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ. ಬ್ರಿಟನ್ ರಾಜಕುಮಾರ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಅವರು ಸಮೀಕ್ಷೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 

ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ 1.8 ರಷ್ಟು ಮತಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಆಸ್ಕರ್ ವಿಜೇತ ನಟಿ ಮಿಚೆಲ್ ಯೋಹ್ ಮತ್ತು ಮಾಜಿ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್, ಮೆಟಾ ಸಿಇಒ ಮಾರ್ಕ್ ಝುಕರ್‌ಬರ್ಗ್ ಮತ್ತು ಬ್ರೆಝಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಕೂಡ ಈ ಪ್ರಭಾವಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Similar News