ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನ ಬಂಧನ
Update: 2023-04-07 23:56 IST
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲು ತೆರೆಯಲು ಪ್ರಯತ್ನಿಸಿರುವುದು ಶುಕ್ರವಾರ ವರದಿಯಾಗಿದೆ.
ಘಟನೆಗೆ ಸಂಬಂಧಿಸಿ ಆರೋಪಿ ಪ್ರಯಾಣಿಕನಾದ ಕಾನ್ಪುರ ಮೂಲದ ಪ್ರತೀಕ್ (30) ಎಂಬಾತನನ್ನು ಕೆಂಪೇಗೌಡ ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಪ್ರಯಾಣದ ಸಮಯದಲ್ಲಿ ಸೀಟ್ ನಂ.18ಎಫ್ ರಲ್ಲಿ ಕುಳಿತಿದ್ದ ಆರೋಪಿಯು ಕುಡಿದ ಮತ್ತಿನಲ್ಲಿ ವಿಮಾನದಲ್ಲಿನ ಪ್ರಯಾಣಿಕರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವಂತೆ ವರ್ತನೆ ಮಾಡಿದ್ದಾನೆ ಎಂದು ವರದಿಯಾಗಿದೆ.