ತೆಲಂಗಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

Update: 2023-04-08 07:54 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಶನಿವಾರ ತೆಲಂಗಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು.

 ಬೀಬಿನಗರದಲ್ಲಿ ಎಐಐಎಂಎಸ್ ಸೇರಿದಂತೆ ಸುಮಾರು 11,300 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಪ್ರಧಾನಿ ಅವರು ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ಹೈದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿವೆ.

ಮೋದಿ ಹೈದರಾಬಾದ್  ಸಮೀಪದ ಬೀಬಿನಗರದ ಏಮ್ಸ್ ಹಾಗೂ  ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

  ಮೋದಿ ಅವರು ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಯ ಅಡಿಪಾಯವನ್ನು ಹಾಕುತ್ತಾರೆ ಹಾಗೂ  ರೈಲ್ವೆಗೆ ಸಂಬಂಧಿಸಿದ ಇತರ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

Similar News