×
Ad

ಬಿಜೆಪಿ ನಾಯಕಿ, ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು

Update: 2023-04-08 13:16 IST

ಚೆನ್ನೈ: ಬಿಜೆಪಿ ನಾಯಕಿ ಹಾಗೂ ಹಿರಿಯ ನಟಿ ಖುಷ್ಬೂ ಸುಂದರ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಖುಷ್ಬೂ  ಪೋಸ್ಟ್ ಹಾಕಿಕೊಂಡು ಮಾಹಿತಿ ನೀಡಿದ್ದಾರೆ. ಖುಷ್ಬೂ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಆಸ್ಪತ್ರೆಯಲ್ಲಿರುವ ಕೆಲ ಫೋಟೊಗಳನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಅಪ್ ಲೋಡ್ ಮಾಡಿದ್ದಾರೆ. ದೇಹದಲ್ಲಿ ತೀವ್ರ ನೋವು ಹಾಗೂ ನಿಶಕ್ತಿ ಕಾಡುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ತೀವ್ರ ಜ್ವರ ಇದ್ದುದರಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. 2-3 ದಿನಗಳಲ್ಲಿ ಜ್ವರ ಕಡಿಮೆಯಾಗಿ ಆರೋಗ್ಯ ಸುಧಾರಿಸಲಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಖುಷ್ಬೂ ತಿಳಿಸಿದ್ದಾರೆ.

ಸಿನಿಮಾ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಬೇಗ ಗುಣಮುಖರಾಗಲಿ ಎಂದು ಖುಷ್ಬೂವಿಗೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

Similar News