×
Ad

ವಿದ್ಯಾರ್ಥಿ-ವಿಜ್ಞಾನಿ ಸಂವಾದ ಕಾರ್ಯಕ್ರಮ

Update: 2023-04-08 19:54 IST

ಉಡುಪಿ : ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದ ವತಿಯಿಂದ ವಿದ್ಯಾರ್ಥಿ-ವಿಜ್ಞಾನಿ ಸಂವಾದ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯ ಸ್ಕೂಲ್ ಆಫ್ ಫಿಸಿಕ್ಸ್ ನಿವೃತ್ತ ಪ್ರೊಫೆಸರ್ ಎಂ.ಶಿವಕುಮಾರ್, ವಿದ್ಯಾರ್ಥಿಗಳು ಭೌತಶಾಸ್ತ್ರದ ಕುರಿತು ಹಲವು  ಮಾಹಿತಿ ಪಡೆದುಕೊಂಡರು.

ಪೂರ್ಣಪ್ರಜ್ಞ ಕಾಲೇಜು, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಮಣಿಪಾಲ ಪದವಿ ಪೂರ್ವ ಕಾಲೇಜು, ವಿದ್ಯೋದಯ ಪದವಿ ಪೂರ್ವ  ಕಾಲೇಜು, ಎಂಜಿಎಂ ಪದವಿ ಪೂರ್ವ ಕಾಲೇಜು ಮತ್ತು ಮಣಿಪಾಲ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ವಿಭಾಗದ ಹಳೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕ್ವಾಂಟಮ್ ಫೀಲ್ಡ್ಸ್, ಸ್ಪೇಸ್ ಟೈಮ್, ಟೈಮ್ ಟ್ರಾವೆಲ್ ಮತ್ತು ವರ್ಮ್ ಹೋಲ್ಸ್ ಇತ್ಯಾದಿ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದರು. ವಿದ್ಯಾರ್ಥಿಗಳು ಭೌತಶಾಸ್ತ್ರಕ್ಕೆ ಸಂಬಂಧಪಟ್ಟ ವಿವಿಧ ವೃತ್ತ ಅವಕಾಶ ಗಳು ಮತ್ತು ಅವರಂತೆ ಯಶಸ್ವಿ ವಿಜ್ಞಾನಿಯಾಗುವ ಮಾರ್ಗಗಳ ಬಗ್ಗೆ ತಿಳಿದು ಕೊಳ್ಳಲು ಈ ಅವಕಾಶವನ್ನು ಬಳಸಿಕೊಂಡರು.

ಪೂರ್ಣಪ್ರಜ್ಞಾ ಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎ.ಪಿ.ಭಟ್, ಪ್ರಾಂಶುಪಾಲ ಡಾ.ರಾಘವೇಂದ್ರ ಎ., ವಿಭಾಗ ಮುಖ್ಯಸ್ಥೆ ಪ್ರತಿಭಾ ಆಚಾರ್ಯ, ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Similar News