×
Ad

ಭಟ್ಕಳ: ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Update: 2023-04-08 22:28 IST

ಭಟ್ಕಳ:  ಬಂದರ ರೋಡ್ 2ನೇ ಕ್ರಾಸ್ ನ ಮನೆ ಮುಂದೆ ನಿಲ್ಲಿಸಿಟ್ಟ ಬುಲೆಟ್ ಬೈಕ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಮೂಲದ ಕುಂಜೆಬೆಟ್ಟ ನಿವಾಸಿ ಇಮ್ರಾಝ್ ಉಸ್ಮಾನ್ ಸಾಹೇಬ್ ಹಾಗೂ ಬಂಟ್ವಾಳ ಫರಂಗಿಪೇಟೆ ಮೂಲದ‌ ನೌಫಾಲ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ್ದು ಆರೋಪಿಗಳು ಬಿಡುಗಡೆ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

Similar News