ಮೂಡುಬಿದಿರೆ: ಕಾರು ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2023-04-08 17:22 GMT

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಕಾಶಿಪಟ್ಣದ ಉಮೇಶ್ ( 49) ಮೃತರು ಎಂದು ತಿಳಿದುಬಂದಿದೆ.

ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು, ಜ್ಯೋತಿನಗರದಲ್ಲಿ ಕ್ರಾಸ್ ಆಗಿ  ಲಾಡಿಗೆ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಉಮೇಶ್ ಅವರನ್ನು ಮೂಡುಬಿದಿರೆಯ ಖಾಸಗಿ  ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News