ರಾಹುಲ್‌ಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇನೆ ಎಂದ ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು
Update: 2023-04-09 08:12 IST
ದಿಂಡಿಗಲ್: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿದ ತಮಿಳುನಾಡಿನ ದಿಂಡಿಗಲ್ ಕಾಂಗ್ರೆಸ್ ಮುಖಂಡರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ದಿಂಡಿಗಲ್ ಪೊಲೀಸರು ಶನಿವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಣಿಕಂಠನ್ ವಿರುದ್ಧ ಈ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
"ಕಾಂಗ್ರೆಸ್ ಮುಖಂಡ ಮಣಿಕಂಠನ್ ವಿರುದ್ಧ ಭಾರತದ ದಂಡಸಂಹಿತೆ ಸೆಕ್ಷನ್ 153 ಬಿ ಅನ್ವಯ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ರಾಹುಲ್ ಗಾಂಧಿಯವರ ಅನರ್ಹತೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಏಪ್ರಿಲ್ 6ರಂದು ಮಣಿಕಂಠನ್ ಈ ಹೇಳಿಕೆ ನೀಡಿದ್ದರು.