×
Ad

ಚಿತ್ರದುರ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿ ಸೌಭಾಗ್ಯ ಕಣಕ್ಕೆ: ಮಾಜಿ ಶಾಸಕ ಬಸವರಾಜನ್ ಘೋಷಣೆ

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ

Update: 2023-04-09 13:08 IST

ಚಿತ್ರದುರ್ಗ: ಕಾಂಗ್ರೆಸ್‌ ನಿಂದ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ತನ್ನ ಪತ್ನಿ ಸೌಭಾಗ್ಯ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಘೋಷಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ನಮ್ಮ ಕ್ಷೇತ್ರದ ಅಭಿಮಾನಿಗಳು, ಹಿತೈಷಿಗಳ ಸಲಹೆ ಮೇರೆಗೆ ಪತ್ನಿ ಸೌಭಾಗ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದೇನೆ. ಎಲ್ಲಾ ವರ್ಗದ ಜನರ ಬೆಂಬಲ ಭರವಸೆಯ ನಿರೀಕ್ಷೆಯಿದೆ' ಎಂದು ತಿಳಿಸಿದರು. 

'ನಾವು ಕಳೆದ ಹಲವು ವರ್ಷಗಳಿಂದ ರಾಜಕಾರಣದಲ್ಲಿದ್ದು, ಜನರ ಸಂಪರ್ಕದಲ್ಲಿದ್ದೇವೆ. ಹಾಗಾಗಿ ಈ ಬಾರಿ ಚುನಾವಣೆಯಿಂದ ಹಿಂದೆ ಸರಿಯುವುದು ಸೂಕ್ತ ಅಲ್ಲ ಎಂದು ಈ ತೀರ್ಮಾನ ಕೈಗೊಂಡಿದ್ದೇವೆ' ಎಂದು ಹೇಳಿದರು.

Similar News