×
Ad

ವಿಜಯನಗರ: ರಂಭಾಪುರಿ ಶ್ರೀಗಳ ಕಾರು ಅಪಘಾತ

Update: 2023-04-09 14:11 IST

ವಿಜಯನಗರ, ಎ.9: ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ರಂಭಾಪುರಿ ಶ್ರೀಗಳಿದ್ದ ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ಅಪಘಾತಕ್ಕೀಡಾದ ಘಟನೆ ರವಿವಾರ ವರದಿಯಾಗಿದೆ. 

ಹರಪನಹಳ್ಳಿ ತಾಲೂಕಿನ  ಚಿರಸ್ತಹಳ್ಳಿಯ ತಿರುವಿನಲ್ಲಿ  ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 

ರಂಭಾಪುರಿ ಶ್ರೀಗಳು ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. 

ಅಪಘಾತದಲ್ಲಿ ಬೈಕ್ ಸಾವರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಕಣ ದಾಖಲಾಗಿದೆ. 

Similar News